Wednesday, March 3, 2021
Home ರಾಜ್ಯ ಮಾಜಿ ಖಡಕ್ IPS ಅಧಿಕಾರಿ ಅಣ್ಣಾಮಲೈ ಇಂದು ಬಿಜೆಪಿಗೆ ಸೇರ್ಪಡೆ

ಮಾಜಿ ಖಡಕ್ IPS ಅಧಿಕಾರಿ ಅಣ್ಣಾಮಲೈ ಇಂದು ಬಿಜೆಪಿಗೆ ಸೇರ್ಪಡೆ

ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಮಾಜಿ ಅಧಿಕಾರಿ ಅಣ್ಣಾಮಲೈ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸಮ್ಮುಖದಲ್ಲಿ ಅಣ್ಣಾಮಲೈ ಇಂದು ಬೆಳಗ್ಗೆ 11 ಗಂಟೆಗೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಕಾರ್ಯನಿರ್ವಹಿಸಿದ್ದ ಅಣ್ಣಾಮಲೈ, ತಮ್ಮ ಖಡಕ್ ನಿರ್ಧಾರಗಳು ಮತ್ತು ಅಡಳಿತದಿಂದ ‘ಸಿಂಗಂ’ ಎಂಬ ಹೆಸರು ಪಡೆದಿದ್ದರು. ನಂತರ 2019ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ತಮ್ಮ ಸ್ವಂತ ಊರು ತಮಿಳುನಾಡಿಗೆ ಹೋಗಿದ್ದರು. ಈಗ ಸ್ವಂತ ಊರಿನಲ್ಲೇ ಇದ್ದು, ಅಲ್ಲೇ ಕೆಲಸ ಮಾಡಿ 2021ರ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದರು.

ತಮಿಳುನಾಡಿನ ನಟ ರಜಿನಿಕಾಂತ್ ಅವರ ಪಕ್ಷದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ ಬಿಜೆಪಿ ಸೇರ್ಪಡೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ನನ್ನ ಪ್ರಕಾರ ಐಪಿಎಸ್ ಎಂದರೆ ದೇಶ, ರಾಷ್ಟ್ರೀಯ ಭದ್ರತೆ. ನಾನು ಅಧಿಕಾರಿಯಾಗಿದ್ದೆ. ಅದೇ ನಿಟ್ಟಿನಲ್ಲಿ ತಮಿಳುನಾಡಿಗೆ ಈಗ ಪರ್ಯಾಯ ಆಡಳಿತದ ಅಗತ್ಯವಿದೆ. ಆ ಮಾರ್ಗವನ್ನು ಬಿಜೆಪಿ ಒದಗಿಸಬಹುದೆಂದು ನಾನು ಭಾವಿಸುತ್ತೇನೆ. ಹೀಗಾಗಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯವಾದಿ ಪಕ್ಷ. ನಾನು ರಾಷ್ಟ್ರೀಯ ವಿಚಾರ ಹೊಂದಿರುವ ವ್ಯಕ್ತಿ. ಹೀಗಾಗಿ ನಾನು ಬೇಷರತ್ತಾಗಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದು, ನರೇಂದ್ರ ಮೊದಿ ಅವರ ಬಗ್ಗೆ ಇರುವ ಮೆಚ್ಚುಗೆಯೇ ಈ ನಿರ್ಧಾರ ತೆಗೆದುಕೊಳ್ಳಲು ಕಾರಣವಾಯಿತು ಎಂದಿದ್ದಾರೆ.

ಬಿಜೆಪಿಗೆ ಸೇರ್ಪಡೆಗೊಳ್ಳುವ ನಿರ್ಧಾರ ಬಹಳ ತಡವಾಗಿತ್ತು. ಸಾಮಾಜಿಕ ಬದಲಾವಣೆಗಿಂತ ರಾಜಕೀಯ ಬದಲಾವಣೆ ಮುಖ್ಯ ಎಂದು ಭಾವಿಸುತ್ತೇನೆ. ಅದಕ್ಕಾಗಿಯೇ ನಾನು ಈಗ ರಾಜಕೀಯ ಪ್ರವೇಶ ಮಾಡುವ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಅಣ್ಣಾಮಲೈ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಅವರು, ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಬೆಂಗಳೂರು ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಅವರು, ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕನ್ನಡದ ಬಿಗ್ ಬಾಸ್...

15 ದಿನಗಳಲ್ಲಿ ಗುತ್ತಿಗೆದಾರರ ಸಮಸ್ಯೆಗೆ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಗುತ್ತಿಗೆದಾರರ ಸಂಘದ ಎಚ್ಚರಿಕೆ

ರಾಜ್ಯದ ಗುತ್ತಿಗೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ರಾಜ್ಯ ಗುತ್ತಿಗೆದಾರರ ಸಂಘದ ಮನವಿಬೆಂಗಳೂರು ಜನವರಿ 20: ಕೋವಿಡ್‌ - 19 ಸಂಕಷ್ಟ ರಾಜ್ಯದಲ್ಲಿ ಆವರಿಸಿದ ನಂತರ ರಾಜ್ಯ ಸರಕಾರವು ನಮ್ಮೆಲ್ಲಾ ವಹಿವಾಟುಗಳಿಗೆ...

ಸಮಾಜದ ಒಳಿತಿಗೆ ಕೆಲಸ ಮಾಡಲು ಲೆಕ್ಕಪರಿಶೋಧಕರಿಗೆ ಗೃಹ ಸಚಿವ ಬಸವರಾಜ ಎಸ್.ಬೊಮ್ಮಾಯಿ ಕರೆ ಇನ್ಸಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಐಟಿಟಿ ಪ್ರಯೋಗಾಲಯ ಉದ್ಘಾಟಿಸಿದ ಸಚಿವರು

ಸಮಾಜದ ಒಳಿತಿಗೆ ಕೆಲಸ ಮಾಡಲು ಲೆಕ್ಕಪರಿಶೋಧಕರಿಗೆ ಗೃಹ ಸಚಿವ ಬಸವರಾಜ ಎಸ್.ಬೊಮ್ಮಾಯಿ ಕರೆಇನ್ಸಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಐಟಿಟಿ ಪ್ರಯೋಗಾಲಯ ಉದ್ಘಾಟಿಸಿದ ಸಚಿವರು

ನವೋದಯ ಬಳಗದ ವತಿಯಿಂದ SSLC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ವಿಶೇಷ ತರಬೇತಿ ಶಾಲೆ

ಬಹುದಿನಗಳ ಕನಸು ನನಸಾದ ದಿನವಿದು. ನವೋದಯ ಬಳಗದ ವತಿಯಿಂದ ಈ ವರ್ಷ SSLC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿಶೇಷ ತರಬೇತಿ ಶಾಲೆಯನ್ನು ತೆರೆಯಲಾಗಿದೆ.

Recent Comments