Wednesday, March 3, 2021
Home ರಾಜ್ಯ ಚಂದನ್ ಶೆಟ್ಟಿ ವಿರುದ್ದ ಸಿಡಿದೆದ್ದ ಮಾದಪ್ಪನ ಭಕ್ತರು. ಮತ್ತೊಂದು ಎಡವಟ್ಟು ಮಾಡಿಕೊಂಡ ಚಂದನ್ ಶೆಟ್ಟಿ.

ಚಂದನ್ ಶೆಟ್ಟಿ ವಿರುದ್ದ ಸಿಡಿದೆದ್ದ ಮಾದಪ್ಪನ ಭಕ್ತರು. ಮತ್ತೊಂದು ಎಡವಟ್ಟು ಮಾಡಿಕೊಂಡ ಚಂದನ್ ಶೆಟ್ಟಿ.

ಮಹದೇಶ್ವರ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿರೋ ಆರೋಪ ಚಂದನ್ ಶೆಟ್ಟಿ ವಿರುದ್ಧ ಕೇಳಿಬಂದಿದೆ.ಚಂದನ್ ಶೆಟ್ಟಿ ಕೋಲು ಮಂಡೆ ಜಂಗಮ ದೇವ ಹಾಡನ್ನು ರೀಮಿಕ್ಸ್​ ಮಾಡಿದ್ದು, ಆ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್​ನಲ್ಲಿ ಗಣೇಶ ಚತುರ್ಥಿಯಂದು ರಿಲೀಸ್ ಆಗಿದೆ. ಕೇವಲ ಮೂರು ದಿನಗಳಲ್ಲಿ ಬರೋಬ್ಬರಿ 3 .5 ಮಿಲಿಯನ್​ಗಿಂತಲೂ ಹೆಚ್ಚಿನ ವೀವ್ಸ್ ಬಂದಿದೆ.ಕೋಲು ಮಂಡೆ ಸಾಂಗ್ ವೈರಲ್ ಆಗ್ತಿದ್ದಂತೆ ರ‍್ಯಾಪರ್ ಚಂದನ್ ಶೆಟ್ಟಿಗೆ ಮಂಡೆ ಬಿಸಿ ಶುರುವಾಗಿದೆ.

ಬಿಡುಗಡೆಯಾಗಿರೋ ವಿಡಿಯೋದಲ್ಲಿ ಶರಣೆ ಸಂಕಣ್ಣೆಯನ್ನು ಅಶ್ಲೀಲವಾಗಿ ತೋರಿಸಲಾಗಿದೆ. ತುಂಡುಡುಗೆಯಲ್ಲಿ ತೋರಿಸಿ ಮಾದಪ್ಪನ ಭಕ್ತರ ಭಾವನೆಗೆ ಧಕ್ಕೆಯುಂಟು ಮಾಡಿದ್ದಾರೆ ಅಂತ ಆಕ್ರೋಶ ವ್ಯಕ್ತವಾಗಿದೆ. ವಿಡಿಯೋ ಕೂಡಲೇ ಡಿಲೀಟ್ ಮಾಡಬೇಕು ಹಾಗೂ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಮಾದಪ್ಪನ ಭಕ್ತರು ಆಗ್ರಹಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಲೆಮಹದೇಶ್ವರ ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ, “ಚಂದನ್ ಶೆಟ್ಟಿ ಅವರಿಗೆ ಕರೆ ಮಾಡಿ ಮಾತನಾಡಿದ್ದೇನೆ. ಅವರು ಕ್ಷಮೆ ಯಾಚಿಸಿದ್ದಾರೆ. ವಿಡಿಯೋ ಡಿಲೀಟ್ ಮಾಡುವಂತೆ ಹೇಳಿದ್ದೇನೆ. ಇಲ್ಲವಾದ್ರೆ ಪ್ರತಿಭಟನೆ ನಡೆಸುತ್ತೇವೆ. ಜೊತೆಗೆ ದೂರು ದಾಖಲು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

Most Popular

ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಅವರು, ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಬೆಂಗಳೂರು ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಅವರು, ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕನ್ನಡದ ಬಿಗ್ ಬಾಸ್...

15 ದಿನಗಳಲ್ಲಿ ಗುತ್ತಿಗೆದಾರರ ಸಮಸ್ಯೆಗೆ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಗುತ್ತಿಗೆದಾರರ ಸಂಘದ ಎಚ್ಚರಿಕೆ

ರಾಜ್ಯದ ಗುತ್ತಿಗೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ರಾಜ್ಯ ಗುತ್ತಿಗೆದಾರರ ಸಂಘದ ಮನವಿಬೆಂಗಳೂರು ಜನವರಿ 20: ಕೋವಿಡ್‌ - 19 ಸಂಕಷ್ಟ ರಾಜ್ಯದಲ್ಲಿ ಆವರಿಸಿದ ನಂತರ ರಾಜ್ಯ ಸರಕಾರವು ನಮ್ಮೆಲ್ಲಾ ವಹಿವಾಟುಗಳಿಗೆ...

ಸಮಾಜದ ಒಳಿತಿಗೆ ಕೆಲಸ ಮಾಡಲು ಲೆಕ್ಕಪರಿಶೋಧಕರಿಗೆ ಗೃಹ ಸಚಿವ ಬಸವರಾಜ ಎಸ್.ಬೊಮ್ಮಾಯಿ ಕರೆ ಇನ್ಸಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಐಟಿಟಿ ಪ್ರಯೋಗಾಲಯ ಉದ್ಘಾಟಿಸಿದ ಸಚಿವರು

ಸಮಾಜದ ಒಳಿತಿಗೆ ಕೆಲಸ ಮಾಡಲು ಲೆಕ್ಕಪರಿಶೋಧಕರಿಗೆ ಗೃಹ ಸಚಿವ ಬಸವರಾಜ ಎಸ್.ಬೊಮ್ಮಾಯಿ ಕರೆಇನ್ಸಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಐಟಿಟಿ ಪ್ರಯೋಗಾಲಯ ಉದ್ಘಾಟಿಸಿದ ಸಚಿವರು

ನವೋದಯ ಬಳಗದ ವತಿಯಿಂದ SSLC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ವಿಶೇಷ ತರಬೇತಿ ಶಾಲೆ

ಬಹುದಿನಗಳ ಕನಸು ನನಸಾದ ದಿನವಿದು. ನವೋದಯ ಬಳಗದ ವತಿಯಿಂದ ಈ ವರ್ಷ SSLC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿಶೇಷ ತರಬೇತಿ ಶಾಲೆಯನ್ನು ತೆರೆಯಲಾಗಿದೆ.

Recent Comments