Wednesday, March 3, 2021
Home ರಾಜ್ಯ ಕನ್ನಡ ಹೋರಾಟಗಾರರ ಮೇಲೆ ಚಪ್ಪಲಿ ಎಸೆದ ಮರಾಠ ಪುಂಡರು.

ಕನ್ನಡ ಹೋರಾಟಗಾರರ ಮೇಲೆ ಚಪ್ಪಲಿ ಎಸೆದ ಮರಾಠ ಪುಂಡರು.

ಸ್ವಾತಂತ್ರ್ಯ ಸೇನಾನಿ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಸ್ಥಾಪನೆ ನೆಪದಲ್ಲಿ ಮಹಾರಾಷ್ಟ್ರದ ಶಿವಸೇನೆ ಕಾರ್ಯಕರ್ತರು ಮತ್ತು ಮರಾಠಿ ಭಾಷಿಕರು ಬೆಳಗಾವಿಯ ಪೀರನವಾಡಿಯಲ್ಲಿ ದಾಂಧಲೆ ನಡೆಸಲು ಯತ್ನಿಸಿದ್ದಾರೆ. ಹೌದು, ಮೂಲಗಳ ಪ್ರಕಾರ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಮಾಡಿದ್ದಕ್ಕೆ
ಆಕ್ರೋಶಗೊಂಡ ಮರಾಠಿಗರು, ಕನ್ನಡ ಪರ ಸಂಘಟನೆ & ರಾಯಣ್ಣನ ಅಭಿಮಾನಿಗಳ ಮೇಲೆ ಚಪ್ಪಲಿ ಎಸೆದಿದ್ದಾರೆ. ಆ ಬಳಿಕವೇ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡು ಪೊಲೀಸರು ಲಾಠಿಚಾರ್ಜ್ ನಡೆಸಿದರು ಎನ್ನಲಾಗಿದೆ.

ರಾಯಣ್ಣ, ಶಿವಾಜಿ ಅಭಿಮಾನಿಗಳ ಮೇಲೆ ಪೋಲೀಸರಿಂದ ಲಾಠಿಚಾರ್ಜ್
ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಸಂಬಂಧ ಕನ್ನಡಪರ ಸಂಘಟನೆಗಳು & ಮರಾಠಿ ಭಾಷಿಕರ ನಡುವೆ ವಾಗ್ವಾದ ಉಂಟಾಗಿತ್ತು. ಈ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿದ್ದ ಡಿಸಿಪಿ ಸೀಮಾ ಲಾಟ್ಕರ್, ಜನ ಗುಂಪುಗೂಡದಂತೆ ನೋಡಿಕೊಳ್ಳಿ ಎಂದು ಸೂಚಿಸಿದ್ದರು.
ಅದರಂತೆ ಸ್ಥಳದಲ್ಲಿ ಗೊಂದಲದ ವಾತಾವರಣ ಸೃಷ್ಟಿಸುತ್ತಿದ್ದ ಎರಡೂ ಗುಂಪುಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ಮಡಿ ಚದುರಿಸಿದ್ದಾರೆ. ನಿನ್ನೆ ರಾತ್ರೋರಾತ್ರಿ ರಾಯಣ್ಣನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿತ್ತು.

LEAVE A REPLY

Please enter your comment!
Please enter your name here

Most Popular

ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಅವರು, ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಬೆಂಗಳೂರು ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಅವರು, ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕನ್ನಡದ ಬಿಗ್ ಬಾಸ್...

15 ದಿನಗಳಲ್ಲಿ ಗುತ್ತಿಗೆದಾರರ ಸಮಸ್ಯೆಗೆ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಗುತ್ತಿಗೆದಾರರ ಸಂಘದ ಎಚ್ಚರಿಕೆ

ರಾಜ್ಯದ ಗುತ್ತಿಗೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ರಾಜ್ಯ ಗುತ್ತಿಗೆದಾರರ ಸಂಘದ ಮನವಿಬೆಂಗಳೂರು ಜನವರಿ 20: ಕೋವಿಡ್‌ - 19 ಸಂಕಷ್ಟ ರಾಜ್ಯದಲ್ಲಿ ಆವರಿಸಿದ ನಂತರ ರಾಜ್ಯ ಸರಕಾರವು ನಮ್ಮೆಲ್ಲಾ ವಹಿವಾಟುಗಳಿಗೆ...

ಸಮಾಜದ ಒಳಿತಿಗೆ ಕೆಲಸ ಮಾಡಲು ಲೆಕ್ಕಪರಿಶೋಧಕರಿಗೆ ಗೃಹ ಸಚಿವ ಬಸವರಾಜ ಎಸ್.ಬೊಮ್ಮಾಯಿ ಕರೆ ಇನ್ಸಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಐಟಿಟಿ ಪ್ರಯೋಗಾಲಯ ಉದ್ಘಾಟಿಸಿದ ಸಚಿವರು

ಸಮಾಜದ ಒಳಿತಿಗೆ ಕೆಲಸ ಮಾಡಲು ಲೆಕ್ಕಪರಿಶೋಧಕರಿಗೆ ಗೃಹ ಸಚಿವ ಬಸವರಾಜ ಎಸ್.ಬೊಮ್ಮಾಯಿ ಕರೆಇನ್ಸಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಐಟಿಟಿ ಪ್ರಯೋಗಾಲಯ ಉದ್ಘಾಟಿಸಿದ ಸಚಿವರು

ನವೋದಯ ಬಳಗದ ವತಿಯಿಂದ SSLC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ವಿಶೇಷ ತರಬೇತಿ ಶಾಲೆ

ಬಹುದಿನಗಳ ಕನಸು ನನಸಾದ ದಿನವಿದು. ನವೋದಯ ಬಳಗದ ವತಿಯಿಂದ ಈ ವರ್ಷ SSLC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿಶೇಷ ತರಬೇತಿ ಶಾಲೆಯನ್ನು ತೆರೆಯಲಾಗಿದೆ.

Recent Comments