ಇದು ಬೆಳಗ್ಗೆ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸದ ಮೇಲೆ ದಾಳಿ ನಡೆಸಿ, ತಪಾಸಣೆ ನಡೆಸಿದ್ದಾರೆ. ಪ್ರಕರಣದ ಸಂಬಂಧ ಈಗಾಗಲೇ CBI ಎಫ್ ಐ ಆರ್ ದಾಖಲಿಸಿದೆ. ಜೊತೆಗೆ ಸುಮಾರು 50 ಲಕ್ಷ ರೂ ನಗದು ಸಹ ಶಿವಕುಮಾರ್ ಮನೆಯಲ್ಲಿ ದೊರೆತಿದೆ . ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು CBI ವಶಕ್ಕೆ ಪಡೆದಿದ್ದು, ಕೆಲವೇ ಕ್ಷಣಗಳಲ್ಲಿ ಅರೆಸ್ಟ್ ಸಹ ಮಾಡಬಹುದು ಎಂದು ತಿಳಿದುಬಂದಿದೆ. ಗಂಗಾನಗರದಲ್ಲಿರುವ ಸಿಬಿಐ ಕಚೇರಿಗೆ ಬಿಗಿ ಬಂದೋಬಸ್ತ್ ಹಾಕಲಾಗಿದ್ದು, ಶಿವಕುಮಾರ್ ಅವರನ್ನು ಗಂಗಾನಗರಕ್ಕೆ ಶಿಫ್ಟ್ ಮಾಡುವ ಸಾಧ್ಯತೆಯಿದೆ.
ಉಪಚುನಾವಣೆ ನಡೆಯುತ್ತಿರುವ ಇಂತಹ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅರೆಸ್ಟ್ ಆಗಿರುವುದರಿಂದ ಕಾರ್ಯಕರ್ತರಲ್ಲಿ ಆತಂಕ ಮನೆಮಾಡಿದೆ