Wednesday, January 20, 2021
Home ರಾಜ್ಯ ಹಿಂದಿನ ಸರಕಾರಗಳ ವೈಫಲ್ಯಗಳನ್ನು ಮನೆ ಮನೆಗೆ ತಲುಪಿಸಲು ಆಮ್‌ ಆದ್ಮಿ ಪಕ್ಷದಿಂದ ಗೊರಕೆ ಸಾಕು ಪೊರಕೆ...

ಹಿಂದಿನ ಸರಕಾರಗಳ ವೈಫಲ್ಯಗಳನ್ನು ಮನೆ ಮನೆಗೆ ತಲುಪಿಸಲು ಆಮ್‌ ಆದ್ಮಿ ಪಕ್ಷದಿಂದ ಗೊರಕೆ ಸಾಕು ಪೊರಕೆ ಬೇಕು ಬೃಹತ್‌ ಅಭಿಯಾನಕ್ಕೆ ಚಾಲನೆ


ಈ ಭಾರಿ ಬಿಬಿಎಂಪಿಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಬಹುಮತ- ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ವಿಶ್ವಾಸ

ಬೆಂಗಳೂರು ಡಿಸೆಂಬರ್‌ 06: ಆಮ್‌ ಆದ್ಮಿ ಪಕ್ಷದಿಂದ ಬಿಬಿಎಂಪಿ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮನೆ, ಮನೆಗೆ ತಲುಪಿಸುವ ಗೊರಕೆ ಸಾಕು ಪೊರಕೆ ಬೇಕು ಬೃಹತ್‌ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಲಾಯಿತು.

ಮಂಜುನಾಥ ನಗರದ ನಿವಾಸಿಗಳಿಗೆ ಪಕ್ಷದ ಬಾವುಟ ನೀಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪೃಥ್ವಿ ರೆಡ್ಡಿ, ಬೆಂಗಳೂರಿನ ಜನತೆ ಮೂರು ಪಕ್ಷಗಳ ಕೆಟ್ಟ ಆಡಳಿತದಿಂದ ಬೇಸತ್ತು ಹೋಗಿದ್ದಾರೆ.

ಆದ ಕಾರಣ ಬಿಬಿಎಂಪಿಯ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮನೆ, ಮನೆಗೆ ತಲುಪಿಸುವ ಅಭಿಯಾನವನ್ನು ಪ್ರತಿ ವಾರ ಮಾಡಲಿದ್ದೇವೆ. ಈ ಬಾರಿ ಬಿಬಿಎಂಪಿಯ ಚುನಾವಣೆಯಲ್ಲಿ ನಾವು ಬಹುಮತಗಳಿಸಲಿದ್ದೇವೆ ಎಂದು ಹೇಳಿದರು.

ವರನಟ ರಾಜ್‌ಕುಮಾರ್ ಅವರ ಪ್ರತಿಮೆ ಮಾಲಾರ್ಪಣೆ ಮಾಡುವ ಮೂಲಕ “ಮನೆ, ಮನೆ ಆಮ್ ಆದ್ಮಿ” ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ, ಖಾಸಗಿ ಸಂಸ್ಥೆ ನಡೆಸಿದ ಸಮೀಕ್ಷೆ ಪ್ರಕಾರ ಶೇ 70 ರಷ್ಟು ಬೆಂಗಳೂರಿನ ಜನತೆ ಬೆಂಗಳೂರಿನಲ್ಲೂ ದೆಹಲಿ ಮಾದರಿ ಆಮ್ ಆದ್ಮಿ ಪಕ್ಷದ ಸರ್ಕಾರ ಇರಬೇಕು ಎಂದು ತಿಳಿಸಿದ್ದಾರೆ.

ಈ ನಂಬಿಕೆಯನ್ನು ನಾವು ಅಧಿಕಾರಕ್ಕೆ ಬಂದರೆ ಉಳಿಸಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಈ ಅಭಿಯಾನದ ಮೂಲಕ ಬೆಂಗಳೂರಿನ ಪ್ರತಿ ನಾಗರಿಕರ ಮನೆಗೆ ಭೇಟಿ ನೀಡಿ ಸರ್ಕಾರದ ಹಾಗೂ ಬಿಬಿಎಂಪಿಯ ವೈಫಲ್ಯ ಗಳನ್ನು ತಿಳಿಸಲಾಗುವುದು. ಮೂರ ಪಕ್ಷಗಳಿಗಿಂತ ಆಮ್ ಆದ್ಮಿ ಪಕ್ಷ ಹೇಗೆ ಭಿನ್ನ ಎಂದು ಮನವರಿಕೆ ಮಾಡಿಕೊಡಲಾಗುವುದು ಎಂದರು.

ಅಭಿಯಾನದಲ್ಲಿ ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ, ಸಹ ಸಂಚಾಲಕಿ ಶಾಂತಲಾ ದಾಮ್ಲೆ, ಉಪಾಧ್ಯಕ್ಷ ಸುರೇಶ್‌ ರಾಥೋಡ್‌, ಕಾರ್ಯದರ್ಶಿ ಸಂಚಿತ್ ಸಹಾನಿ, ಜಂಟಿ ಕಾರ್ಯದರ್ಶಿ ದರ್ಶನ್ ಜೈನ್, ರಾಜಾಜಿ ನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಗುರುಮೂರ್ತಿ, ಮಂಜುನಾಥ್ ನಗರ ವಾರ್ಡ್ ಅಧ್ಯಕ್ಷ ಬಾಲಕೃಷ್ಣೇಗೌಡ, ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷ್ಮಿಕಾಂತ್ ರಾವ್, ಫಣಿರಾಜ್.ಎಸ್.ವಿ. ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

Most Popular

15 ದಿನಗಳಲ್ಲಿ ಗುತ್ತಿಗೆದಾರರ ಸಮಸ್ಯೆಗೆ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಗುತ್ತಿಗೆದಾರರ ಸಂಘದ ಎಚ್ಚರಿಕೆ

ರಾಜ್ಯದ ಗುತ್ತಿಗೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ರಾಜ್ಯ ಗುತ್ತಿಗೆದಾರರ ಸಂಘದ ಮನವಿಬೆಂಗಳೂರು ಜನವರಿ 20: ಕೋವಿಡ್‌ - 19 ಸಂಕಷ್ಟ ರಾಜ್ಯದಲ್ಲಿ ಆವರಿಸಿದ ನಂತರ ರಾಜ್ಯ ಸರಕಾರವು ನಮ್ಮೆಲ್ಲಾ ವಹಿವಾಟುಗಳಿಗೆ...

ಸಮಾಜದ ಒಳಿತಿಗೆ ಕೆಲಸ ಮಾಡಲು ಲೆಕ್ಕಪರಿಶೋಧಕರಿಗೆ ಗೃಹ ಸಚಿವ ಬಸವರಾಜ ಎಸ್.ಬೊಮ್ಮಾಯಿ ಕರೆ ಇನ್ಸಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಐಟಿಟಿ ಪ್ರಯೋಗಾಲಯ ಉದ್ಘಾಟಿಸಿದ ಸಚಿವರು

ಸಮಾಜದ ಒಳಿತಿಗೆ ಕೆಲಸ ಮಾಡಲು ಲೆಕ್ಕಪರಿಶೋಧಕರಿಗೆ ಗೃಹ ಸಚಿವ ಬಸವರಾಜ ಎಸ್.ಬೊಮ್ಮಾಯಿ ಕರೆಇನ್ಸಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಐಟಿಟಿ ಪ್ರಯೋಗಾಲಯ ಉದ್ಘಾಟಿಸಿದ ಸಚಿವರು

ನವೋದಯ ಬಳಗದ ವತಿಯಿಂದ SSLC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ವಿಶೇಷ ತರಬೇತಿ ಶಾಲೆ

ಬಹುದಿನಗಳ ಕನಸು ನನಸಾದ ದಿನವಿದು. ನವೋದಯ ಬಳಗದ ವತಿಯಿಂದ ಈ ವರ್ಷ SSLC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿಶೇಷ ತರಬೇತಿ ಶಾಲೆಯನ್ನು ತೆರೆಯಲಾಗಿದೆ.

ತುಮಕೂರು ಜಿಲ್ಲೆಯ ಬೋರನಕಣಿವೆ ಜಲಾಶಯದ ಇತಿಹಾಸ

ತುಮಕೂರು ಜಿಲ್ಲೆಯ #ಬೋರನಕಣಿವೆ ಜಲಾಶಯದ ಇತಿಹಾಸ: ಅಣೆಕಟ್ಟಿನ ಪರಿಚಯ: ತುಮಕೂರಿನಿಂದ 72 ಕಿಲೋಮೀಟರ್ ದೂರದಲ್ಲಿರುವ ಚಿಕ್ಕನಾಯಕನಹಳ್ಳಿ ತೆಂಗಿನಕಾಯಿಗೆ ಹೆಸರಾಗಿದೆ. ಯಾರನ್ನಾದರೂ ಅಣಕಿಸುವಾಗ...

Recent Comments