Wednesday, January 20, 2021
Home ರಾಜ್ಯ ಭಾರತ್‌ ಬಂದ್‌ಗೆ ರಾಜ್ಯ ಆಮ್‌ ಆದ್ಮಿ ಪಕ್ಷ ಬೆಂಬಲ: ನಾಳೆ 11 ಗಂಟೆಗೆ ಮೌರ್ಯ ವೃತ್ತದಲ್ಲಿ...

ಭಾರತ್‌ ಬಂದ್‌ಗೆ ರಾಜ್ಯ ಆಮ್‌ ಆದ್ಮಿ ಪಕ್ಷ ಬೆಂಬಲ: ನಾಳೆ 11 ಗಂಟೆಗೆ ಮೌರ್ಯ ವೃತ್ತದಲ್ಲಿ ಧರಣಿ ಸತ್ಯಾಗ್ರಹ


ಬೆಂಗಳೂರು ಡಿಸೆಂಬರ್‌ 07: ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ರೈತರು ನಾಳೆ (ಡಿಸೆಂಬರ್‌ 8) ನೀಡಿರುವ ಭಾರತ್‌ ಬಂದ್‌ ಗೆ ರಾಜ್ಯ ಆಮ್‌ ಆದ್ಮಿ ಪಕ್ಷ ಬೆಂಬಲ ನೀಡಿದ್ದು, ಪಕ್ಷದ ವತಿಯಿಂದ ಮೌರ್ಯ ವೃತ್ತದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಆಮ್‌ ಆದ್ಮಿ ಪಕ್ಷದ ಬೆಂಗಳೂರು ಘಟಕಡ ಅಧ್ಯಕ್ಷ ಮೋಹನ್‌ ದಾಸರಿ ಹೇಳಿದ್ದಾರೆ.

ಈ ದೇಶದ ಬೆನ್ನೆಲುಬಾದ ರೈತ ಕಳೆದ 20 ದಿನಗಳಿಂದ ಕೊರೆವ ಚಳಿಯನ್ನೂ ಲೆಕ್ಕಿಸದೆ ದೆಹಲಿ/ ಪಂಜಾಬ್ ಗಡಿಯಲ್ಲಿ‌ ಪ್ರತಿಭಟನೆ ನಡೆಸುತ್ತಿದ್ದು ಕೇಂದ್ರ ಸರ್ಕಾರ ಸರಿಯಾಗಿ ಸ್ಪಂದಿಸದೆ ಅನ್ನದಾತನನ್ನು ಅವಮಾನ ಮಾಡಿದೆ. ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಸೇರಿದಂತೆ ಮಾಡಿದರು.

ಯ್ದೆಗಳನ್ನು ಹಾಳು ಮಾಡಿರುವ ನರೇಂದ್ರ ಮೋದಿ ಅವರ ನೇತೃತ್ವದ ರಾಜ್ಯ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ. ಯಡಿಯೂರಪ್ಪನವರ ನೇತೃತ್ವದ ರಾಜ್ಯ ಸರ್ಕಾರವೂ ಸಹ ಕೇಂದ್ರದ ತಾಳಕ್ಕೆ ಕುಣಿಯುತ್ತಿದ್ದು, ರೈತರ ಪರವಾಗಿ ನಿಂತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿಯ ಆಮ್ ಆದ್ಮಿ ಸರ್ಕಾರ ರೈತರನ್ನು ಕೂಡಿಹಾಕಲು ಮೈದಾನಗಳನ್ನು ಕೊಡದೆ ರೈತರ ಬೆನ್ನಿಗೆ ನಿಂತಿದೆ ಹಾಗೂ ನೀರು, ಊಟ, ಹೊದಿಕೆಯ ವ್ಯವಸ್ಥೆ ಮಾಡಿದೆ. ಆದರೆ ಕೇಂದ್ರ ಸರ್ಕಾರ ನೀಚ ಬುದ್ದಿ ತೋರಿಸಿ ಅನ್ನದಾತನ ವಿರುದ್ದ ನಿಂತಿದೆ ಎಂದು ಕಿಡಿಕಾರಿದರು.

ಈ ದೇಶದ ಸಂಸ್ಕೃತಿಗೆ ಕೊಡಲಿ ಪೆಟ್ಟು ಹಾಕಲು ಹೊರಟಿರುವ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು, ರೈತರ ಜೊತೆ ಇಡೀ ದೇಶದ ಜನರಿದ್ದಾರೆ ಎನ್ನುವುದು ಸರ್ಕಾರದ ಅರಿವಿಗೆ ಬರುವಂತೆ ಮಾಡಬೇಕು, ಆದ ಕಾರಣ ಪಕ್ಷಾತೀತವಾಗಿ ಎಲ್ಲ ನಾಗರಿಕರೂ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಬೇಕು ಎಂದು ಮನವಿ ಮಾಡಿದರು.

LEAVE A REPLY

Please enter your comment!
Please enter your name here

Most Popular

15 ದಿನಗಳಲ್ಲಿ ಗುತ್ತಿಗೆದಾರರ ಸಮಸ್ಯೆಗೆ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಗುತ್ತಿಗೆದಾರರ ಸಂಘದ ಎಚ್ಚರಿಕೆ

ರಾಜ್ಯದ ಗುತ್ತಿಗೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ರಾಜ್ಯ ಗುತ್ತಿಗೆದಾರರ ಸಂಘದ ಮನವಿಬೆಂಗಳೂರು ಜನವರಿ 20: ಕೋವಿಡ್‌ - 19 ಸಂಕಷ್ಟ ರಾಜ್ಯದಲ್ಲಿ ಆವರಿಸಿದ ನಂತರ ರಾಜ್ಯ ಸರಕಾರವು ನಮ್ಮೆಲ್ಲಾ ವಹಿವಾಟುಗಳಿಗೆ...

ಸಮಾಜದ ಒಳಿತಿಗೆ ಕೆಲಸ ಮಾಡಲು ಲೆಕ್ಕಪರಿಶೋಧಕರಿಗೆ ಗೃಹ ಸಚಿವ ಬಸವರಾಜ ಎಸ್.ಬೊಮ್ಮಾಯಿ ಕರೆ ಇನ್ಸಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಐಟಿಟಿ ಪ್ರಯೋಗಾಲಯ ಉದ್ಘಾಟಿಸಿದ ಸಚಿವರು

ಸಮಾಜದ ಒಳಿತಿಗೆ ಕೆಲಸ ಮಾಡಲು ಲೆಕ್ಕಪರಿಶೋಧಕರಿಗೆ ಗೃಹ ಸಚಿವ ಬಸವರಾಜ ಎಸ್.ಬೊಮ್ಮಾಯಿ ಕರೆಇನ್ಸಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಐಟಿಟಿ ಪ್ರಯೋಗಾಲಯ ಉದ್ಘಾಟಿಸಿದ ಸಚಿವರು

ನವೋದಯ ಬಳಗದ ವತಿಯಿಂದ SSLC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ವಿಶೇಷ ತರಬೇತಿ ಶಾಲೆ

ಬಹುದಿನಗಳ ಕನಸು ನನಸಾದ ದಿನವಿದು. ನವೋದಯ ಬಳಗದ ವತಿಯಿಂದ ಈ ವರ್ಷ SSLC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿಶೇಷ ತರಬೇತಿ ಶಾಲೆಯನ್ನು ತೆರೆಯಲಾಗಿದೆ.

ತುಮಕೂರು ಜಿಲ್ಲೆಯ ಬೋರನಕಣಿವೆ ಜಲಾಶಯದ ಇತಿಹಾಸ

ತುಮಕೂರು ಜಿಲ್ಲೆಯ #ಬೋರನಕಣಿವೆ ಜಲಾಶಯದ ಇತಿಹಾಸ: ಅಣೆಕಟ್ಟಿನ ಪರಿಚಯ: ತುಮಕೂರಿನಿಂದ 72 ಕಿಲೋಮೀಟರ್ ದೂರದಲ್ಲಿರುವ ಚಿಕ್ಕನಾಯಕನಹಳ್ಳಿ ತೆಂಗಿನಕಾಯಿಗೆ ಹೆಸರಾಗಿದೆ. ಯಾರನ್ನಾದರೂ ಅಣಕಿಸುವಾಗ...

Recent Comments