Saturday, February 27, 2021
Home ರಾಜ್ಯ 15 ದಿನಗಳಲ್ಲಿ ಗುತ್ತಿಗೆದಾರರ ಸಮಸ್ಯೆಗೆ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಗುತ್ತಿಗೆದಾರರ ಸಂಘದ ಎಚ್ಚರಿಕೆ

15 ದಿನಗಳಲ್ಲಿ ಗುತ್ತಿಗೆದಾರರ ಸಮಸ್ಯೆಗೆ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಗುತ್ತಿಗೆದಾರರ ಸಂಘದ ಎಚ್ಚರಿಕೆ



ರಾಜ್ಯದ ಗುತ್ತಿಗೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ರಾಜ್ಯ ಗುತ್ತಿಗೆದಾರರ ಸಂಘದ ಮನವಿ
ಬೆಂಗಳೂರು ಜನವರಿ 20: ಕೋವಿಡ್‌ – 19 ಸಂಕಷ್ಟ ರಾಜ್ಯದಲ್ಲಿ ಆವರಿಸಿದ ನಂತರ ರಾಜ್ಯ ಸರಕಾರವು ನಮ್ಮೆಲ್ಲಾ ವಹಿವಾಟುಗಳಿಗೆ ತಾತ್ಕಾಲಿಕವಾಗಿ ಕೆಲವು ತಿಂಗಳುಗಳಿಂದ ಹಲವಾರು ನಿರ್ಬಂಧಗಳನ್ನು ಹೇರಿದೆ. ಇದರ ಪರಿಣಾಮ ರಾಜ್ಯದ ಒಂದು ಲಕ್ಷಕ್ಕೂ ಅಧಿಕ ನೋಂದಾಯಿತ ಗುತ್ತಿಗೆದಾರರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ಅದರಲ್ಲೂ ಮುಖ್ಯವಾಗಿ ವಿವಿದ ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆದಾರರಿಗೆ ಬಾಕಿ ಉಳಿದಿರುವ ಬಿಲ್ಲುಗಳಿಗೆ ಹಣ ಬಿಡುಗಡೆ ಮಾಡುವುದು ಹಾಗೂ ಪ್ಯಾಕೇಜ್‌ ಪದ್ದತಿಯ ಅಡಿಯಲ್ಲಿ ಟೆಂಡರ್‌ ಕರೆಯುವುದನ್ನು ರದ್ದುಪಡಿಸುವಂತೆ ಹಲವಾರು ಬಾರಿ ಮಾನ್ಯ ಮುಖ್ಯಮಂತ್ರಿಗಲ್ಲಿ, ಮಾನ್ಯ ಸಚಿವರುಗಳಲ್ಲಿ ಹಾಗೂ ಉನ್ನತ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದರೂ ಉಪಯೋಗವಾಗಿಲ್ಲ. ನಮ್ಮ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸದೇ ಇದ್ದಲ್ಲಿ ರಾಜ್ಯದ ಗುತ್ತಿಗೆದಾರರು ತೀವ್ರ ಸಂಕಷ್ಟಕ್ಕೆ ಈಡಾಗಲಿದ್ದು, ಸಮಸ್ಯೆಗಳ ಪರಿಹಾರಕ್ಕೆ ಕೂಡಲೇ ಕ್ರಮ ಕೈಗೊಳ್ಳಿ ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟಕ್ಕೆ ಮುಂದಾಗುವುದಾಗಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಅವರು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಇಂದು ಗುತ್ತಿಗೆದಾರರ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಗುತ್ತಿಗೆದಾರರು ಎದುರಿಸುತ್ತಿರುವ ಹಲವಾರು ಸಮಸ್ಯೆಗಳ ಬಗ್ಗೆ ವಿವರಣೆ ನೀಡಿದರು.
ಪ್ರಮುಖ ಬೇಡಿಕೆಗಳು :-
ಟೆಂಡರ್‌ನಲ್ಲಿ ಭಾಗವಹಿಸದಂತೆ ನಿರ್ಬಂಧಿಸುತ್ತಿರುವ ಕುರಿತು:
ರಾಜಕೀಯ ಪ್ರಭಾವವನ್ನು ಬಳಸಿಕೊಂಡು ಕೆಲವು ಅಧಿಕಾರಿಗಳು ಗುತ್ತಿಗೆದಾರರಿಗೆ ಸರಕಾರಿ ಟೆಂಡರ್‌ಗಳಲ್ಲಿ ಭಾಗವಹಿಸದಂಥೆ ನಿರ್ಬಂಧವನ್ನು ಹೇರುತ್ತಿದ್ದಾರೆ. ಇದರ ಹೊರತಾಗಿ ಗುತ್ತಿಗೆದಾರರು ಟೆಂಡರ್‌ನಲ್ಲಿ ಭಾಗವಹಿಸಿ ಬಿಡ್‌ ಸಲ್ಲಿಸಿದ ನಂತರವೂ ಟೆಂಡರನ್ನು ಹಿಂಪಡೆಯುವಂತೆ ಒತ್ತಡ ತಂತ್ರವನ್ನು ಅನುಸರಿಸುತ್ತಿದ್ದಾರೆ. ಇದರಿಂದ ಟೆಂಡರ್‌ನಲ್ಲಿ ಸ್ಪರ್ಧಾತ್ಮಕ ದರಗಳಿಂದ ವಂಚಿತವಾಗಿ ಹೆಚ್ಚಿನ ಪಾರದರ್ಶಕತೆಗೆ ಅವಕಾಶವಿಲ್ಲದೆ ರಾಜ್ಯದ ತೆರಿಗೆದಾರರ ಹಣ ವ್ಯರ್ಥವಾಗುತ್ತಿದ್ದು ಗುತ್ತಿಗೆದಾರರ ಮೂಲಭೂತ ಹಕ್ಕಿಗೆ ಧಕ್ಕೆಯಾಗುತ್ತಿದೆ ಎಂದರು.

ಗುತ್ತಿಗೆದಾರರ ಬಾಕಿ ಉಳಿದಿರುವ ಬಿಲ್ಲುಗಳಿಗೆ ಹಣ ಪಾವತಿ:
ಕಳೆದ ಹಲವಾರು ತಿಂಗಳುಗಳಿಂದ ಸರಕಾರದ ಹಲವಾರು ಇಲಾಖೆಗಳಿಂದ ಗುತ್ತಿಗೆದಾರರಿಗೆ ಬಿಲ್ಲುಗಳನ್ನು ನೀಡಲಾಗಿರುವುದಿಲ್ಲ. ಬಾಕಿ ಬಿಲ್‌ ಗಳಿಗೆ ಹಣಪಾವತಿಸುವ ಸಮಯದಲ್ಲಿ ಸರಕಾರದ ಆದೇಶ ಸಂಖ್ಯೆ: No.PWD/260/SOFC/2001 (P) Dated 25th September-2000 ರಲ್ಲಿ ಸೂಚಿಸಿರುವಂತೆ ಗುತ್ತಿಗೆದಾರರ ಬಾಕಿ ಉಳಿದಿರುವ ಬಿಲ್ಲುಗಳಿಗೆ ಶೇ. 80 ರಷ್ಟು ಹಣ ಬಿಡುಗಡೆ ಮಾಡುವುದನ್ನು ಜೇಷ್ಠತೆ ಆಧಾರದ ಮೇಲೆ ಕಡ್ಡಾಯ ಮಾಡಿದೆ. ಈ ಆಧಾರದಲ್ಲಿ ಅಂದರೆ D.B.R ಸಂಖ್ಯೆ ಅನುಗುಣವಾಗಿ ಜೇಷ್ಟತೆ ಮೇಲೆ ಹಣ ಬಿಡುಗಡೆ ಮಾಡಬೇಕು. ಅಲ್ಲದೆ, ಸ್ಟಾಂಡರ್ಡ್‌ ಬಿಡ್‌ ಟೆಂಡರ್‌ ಡಾಕ್ಯುಮೆಂಟ್‌ ನಲ್ಲಿ 90 ದಿನಗಳ ಸಮಯದ ಒಳಗಾಗಿ ಗುತ್ತಿಗೆದಾರರ ನಿರ್ವಹಿಸಿದ ಕಾಮಗಾರಿಗಳಿಗೆ ಹಣ ಪಾವತಿಸುವಂತೆ ತಿಳಿಸಲಾಗಿರುತ್ತದೆ. ಆ ಸಮಯದ ನಂತರ ಪಾವತಿ ವಿಳಂಬಕ್ಕೆ ಬಡ್ಡಿ ದರವನ್ನು ಸೇರಿಸಿ ನೀಡಬೇಕು ಎಂದರು.

ಪ್ಯಾಕೇಜ್‌ ಪದ್ದತಿಯನ್ನು ರದ್ದಗೊಳಿಸಿ:
ಪ್ಯಾಕೇಜ್‌ ಪದ್ದತಿಯಲ್ಲಿ ಟೆಂಡರ್ ಗಳನ್ನು ಕರೆಯುತ್ತಿರುವುದರಿಂದ ನಮ್ಮ ರಾಜ್ಯದ ಸ್ಥಳೀಯ ಗುತ್ತಿಗೆದಾರರಿಗೆ ಟೆಂಡರ್‌ನಲ್ಲಿ ಭಾಗವಹಿಸದಂತಹ ಸ್ಥಿತಿ ನಿರ್ಮಾಣವಾಗಿದ್ದು, ಸ್ಥಳೀಯ ಗುತ್ತಿಗೆದಾರರಿಗೆ ಕಾಮಗಾರಿ ದೊರೆಯದಂತಹ ಪರಿಸ್ಥಿತಿ ಎದುರಾಗಿದೆ. ಅಲ್ಲದೆ, ಇದು ಹೊರ ರಾಜ್ಯದ ಗುತ್ತಿಗೆದಾರರಿಗೆ ಹೆಚ್ಚು ಅನುಕೂಲವಾಗುತ್ತಿದೆ. ಆದ್ದರಿಂದ ಸಣ್ಣ ಸಣ್ಣ ಕಾಮಗಾರಿಗಳನ್ನು ಒಟ್ಟುಗೂಡಿಸಿ ಪ್ಯಾಕೇಜ್‌ ಪದ್ದತಿಯಲ್ಲಿ ಟೆಂಡರ್‌ ಕರೆಯುವುದನ್ನು ನಿಲ್ಲಿಸಿ ಒಂದೊಂದು ಕಾಮಗಾರಿಗಳಿಗೂ ಪ್ರತ್ಯೇಕವಾಗಿ ಟೆಂಡರ್‌ ಕರೆಯುವಂತೆ ಅವರು ಮನವಿ ಮಾಡಿದರು.

ಮಾದರಿ ಟೆಂಡರ್‌ ದಾಖಲೆ ರಚನಾ ಸಮಿತಿಗೆ ಮನವಿ:
ದ್ವಿ ಲಕೋಟೆ ಪ್ಯಾಕೇಜ್‌ ಪದ್ದತಿಯ Standard Tender Document ನಲ್ಲಿ ಸರಿಯಾದ ಮಾನದಂಡಗಳಿಲ್ಲದೆ ಎಲ್ಲಾ ಷರತ್ತುಗಳನ್ನು ತಮ್ಮ ಇಚ್ಚೆಗೆ ಬಂದಂತೆ ಪ್ರತ್ಯೇಕ ನಿಯಮಗಳನ್ನು ರೂಪಿಸುತ್ತಿರುವುದು ವಿವಿಧ ಸರಕಾರಿ ಇಲಾಖೆಗಳಲ್ಲಿ ಕಂಡುಬಂದಿದೆ. ಕರ್ನಾಟಕ ರಾಜ್ಯ ಟೆಂಡರ್‌ನಲ್ಲಿ ಭಾಗವಹಿಸುವ ಗುತ್ತಿಗೆದಾರರಿಗೆ Standard Tender Document ನಲ್ಲಿ ಏಕರೂಪ ನಿಯಮವನ್ನು ಇಡಿ ರಾಜ್ಯಕ್ಕೆ ಅನ್ವಯವಾಗುವಂತಹ ನಿಯಮಾವಳಿಗಳನ್ನು ರೂಪಿಸಬೇಕೆಂದು ಮನವಿ ಮಾಡಿದರು.

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಪ್ರಧಾನ ಕಾರ್ಯದರ್ಶಿ ಜಿ ಎಂ ರವೀಂದ್ರ ಮಾತನಾಡಿ,, ನೆರೆರಾಜ್ಯವಾದ ಕೇರಳದಲ್ಲಿ ರೂ.5.00 ಕೋಟಿವರೆಗಿನ ಕಾಮಗಾರಿಯನ್ನು ಒಂದು ಲಕೋಟೆ ಪದ್ದತಿಯಲ್ಲಿ ಯಾವುದೇ ಪೂರ್ವಭಾಗಿ ಷರತ್ತುಗಳಿಲ್ಲದೆ ಗುತ್ತಿಗೆದಾರರು ನೊಂದಾವಣಿಯಾಗಿರುವ ಆಯಾ ದರ್ಜೆಗೆ ಅನುಗುಣವಾಗಿ ಟೆಂಡರ್‌ನಲ್ಲಿ ಭಾಗವಹಿಸುವ ನಿಯಮ ಜಾರಿಯಲ್ಲಿರುತ್ತದೆ. ಇದೇ ಮಾದರಿಯ ನಿಯಮವನ್ನು ನಮ್ಮ ರಾಜ್ಯದಲ್ಲೂ ಅಳವಡಿಸಿದರೆ ಸ್ಥಳೀಯ ನಿವಾಸಿಗಳಾದ ರಾಜ್ಯದ ಗುತ್ತಿಗೆದಾರರು ಟೆಂಡರ್‌ನಲ್ಲಿ ಭಾಗವಹಿಸಿ ಕಾಮಗಾರಿ ಪಡೆಯುವಂತಹ ಅವಕಾಶ ಕಲ್ಪಿಸಿದಂತಾಗುತ್ತದೆ.

ಅಲ್ಲದೆ, ಸ್ಟಾಂಡರ್ಡ್‌ ಬಿಡ್‌ ಡಾಕ್ಯುಮೆಂಟ್‌ನಲ್ಲಿ ಅದೇ ಸ್ವರೂಪದ ಕಾಮಗಾರಿಯನ್ನು ಹಾಲಿಯಿರುವ ಶೇಕಡಾ 50 ರಷ್ಟು ನಿಯಮಕ್ಕೆ ಮಹರಾಷ್ಟ್ರ ಸರಕಾರ ಲೋಕೋಪಯೋಗಿ ಇಲಾಖೆಯ ಆದೇಶದಂತೆ ಶೇ. 30 ಕ್ಕೆ ಇಳಿಸಬೇಕು. ಹಾಗೆಯೇ, ಗುತ್ತಿಗೆದಾರರು ಸ್ವಂತ ಯಂತ್ರೋಪಕರಣಗಳನ್ನು ಹೊಂದಿರಬೇಕೆಂಬ ನಿಯಮವನ್ನು ಎಸ್‌ಬಿಟಿಡಿ (Standard Bid Tender Document) ನಲ್ಲಿ ಸಡಲಿಸಿ ಅದರ ಬದಲಾಗಿ ಬಾಡಿಗೆ ರೂಪದಲ್ಲಿ ಕರಾರು ಮಾಡಿಕೊಂಡ ಪತ್ರವನ್ನು ಮಾನ್ಯ ಮಾಡಬೇಕು. 90 ದಿನಗಳ ಒಳಗಾಗಿ ಟೆಂಡರ್‌ ಅನುಮೋದಿಸಿ ಅರ್ಹ ಗುತ್ತಿಗೆದಾರರಿಗೆ ಕಾಮಗಾರಿಯ ಕಾರ್ಯಾದೇಶವನ್ನು ನೀಡುವ ಮೂಲಕ ಅನಾವಶ್ಯಕ ವಿಳಂಬ ನೀತಿಯನ್ನು ಬಿಡಬೇಕು ಎಂದು ಹೇಳಿದರು.

ಉಪಾಧ್ಯಕ್ಷರಾದ ಅಂಬಿಕಾಪತಿ, ದಿನೇಶ್‌, ಖಚಾಂಚಿ ನಟರಾಜ್, ಜಂಟಿ ಕಾರ್ಯದರ್ಶಿ ರಮೇಶ್‌‌ ಅವರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

Most Popular

ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಅವರು, ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಬೆಂಗಳೂರು ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಅವರು, ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕನ್ನಡದ ಬಿಗ್ ಬಾಸ್...

15 ದಿನಗಳಲ್ಲಿ ಗುತ್ತಿಗೆದಾರರ ಸಮಸ್ಯೆಗೆ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಗುತ್ತಿಗೆದಾರರ ಸಂಘದ ಎಚ್ಚರಿಕೆ

ರಾಜ್ಯದ ಗುತ್ತಿಗೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ರಾಜ್ಯ ಗುತ್ತಿಗೆದಾರರ ಸಂಘದ ಮನವಿಬೆಂಗಳೂರು ಜನವರಿ 20: ಕೋವಿಡ್‌ - 19 ಸಂಕಷ್ಟ ರಾಜ್ಯದಲ್ಲಿ ಆವರಿಸಿದ ನಂತರ ರಾಜ್ಯ ಸರಕಾರವು ನಮ್ಮೆಲ್ಲಾ ವಹಿವಾಟುಗಳಿಗೆ...

ಸಮಾಜದ ಒಳಿತಿಗೆ ಕೆಲಸ ಮಾಡಲು ಲೆಕ್ಕಪರಿಶೋಧಕರಿಗೆ ಗೃಹ ಸಚಿವ ಬಸವರಾಜ ಎಸ್.ಬೊಮ್ಮಾಯಿ ಕರೆ ಇನ್ಸಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಐಟಿಟಿ ಪ್ರಯೋಗಾಲಯ ಉದ್ಘಾಟಿಸಿದ ಸಚಿವರು

ಸಮಾಜದ ಒಳಿತಿಗೆ ಕೆಲಸ ಮಾಡಲು ಲೆಕ್ಕಪರಿಶೋಧಕರಿಗೆ ಗೃಹ ಸಚಿವ ಬಸವರಾಜ ಎಸ್.ಬೊಮ್ಮಾಯಿ ಕರೆಇನ್ಸಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಐಟಿಟಿ ಪ್ರಯೋಗಾಲಯ ಉದ್ಘಾಟಿಸಿದ ಸಚಿವರು

ನವೋದಯ ಬಳಗದ ವತಿಯಿಂದ SSLC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ವಿಶೇಷ ತರಬೇತಿ ಶಾಲೆ

ಬಹುದಿನಗಳ ಕನಸು ನನಸಾದ ದಿನವಿದು. ನವೋದಯ ಬಳಗದ ವತಿಯಿಂದ ಈ ವರ್ಷ SSLC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿಶೇಷ ತರಬೇತಿ ಶಾಲೆಯನ್ನು ತೆರೆಯಲಾಗಿದೆ.

Recent Comments